ಅಕ್ಕಿ ಕೊರತೆ ಉಂಟಾದ ಹಿನ್ನಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ಹಣ ವರ್ಗಾಯಿಸುವ ಪ್ರಕ್ರಿಯೆಗೆ ಇಂದು ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಈ ಮೂಲಕ ಪಡಿತರದಾರರಿಗೆ ಕೇಂದ್ರ ಸರ್ಕಾರ 5ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿ 5ಕೆಜಿ ಅಕ್ಕಿಗೆ 170ರೂ ಹಣವನ್ನು ತಾತ್ಕಾಲಿಕವಾಗಿ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರ ವರ್ಗಾಯಿಸಲಿದೆ.
ಪಡಿತರ ಚೀಟಿಯಲ್ಲಿ ಹೆಸರಿರುವ ಸದಸ್ಯರೆಲ್ಲರಿಗೂ ತಲಾ 5 ಕೆಜಿ ಅಕ್ಕಿಯ ದುಡ್ಡನ್ನು ಆ ಕುಟುಂಬದ ಮುಖ್ಯಸೃತ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಈ ಯೋಜನೆ ಪ್ರಸಕ್ತ ತಿಂಗಳಿನಿಂದಲೇ ಆರಂಭವಾಗಿದೆ. ಅಂತೆಯೇ ವಿದಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 5
ಗಂಟೆಗೆ ಹಣ ವರ್ಗಾವಣೆಗೆ ಚಾಲನೆ ಕೊಡಲಿದ್ದಾರೆ.
ಈ ಮೂಲಕ ಈ ತಿಂಗಳೊಳಗೆ ಪಡಿತರ ಖಾತೆಗೆ ಹಣ ಜಮಾ ಆಗಲಿದೆ. ಹೆಚ್ಚುವರಿ ಅಕ್ಕಿ ಲಭ್ಯವಾದ ಬಳಿಕ ಹಣ ವರ್ಗಾವಣೆ ನಿಲ್ಲಿಸಿ, 5 ಕೆಜಿ ಅಕ್ಕಿ ವಿತರಿಸಲಿದ್ದೇವೆ ಎಂದು ಸರ್ಕಾರ ಈ ಮೊದಲೇ ತಿಳಿಸಿತ್ತು.















