ಸಿಎಂ ಸಿದ್ದರಾಮಯ್ಯಗೆ ತೀವ್ರ ಕೆಮ್ಮು: ಹಲವು ಕಾರ್ಯಕ್ರಮಗಳು ರದ್ದು

Coastal Bulletin
ಸಿಎಂ ಸಿದ್ದರಾಮಯ್ಯಗೆ ತೀವ್ರ ಕೆಮ್ಮು: ಹಲವು ಕಾರ್ಯಕ್ರಮಗಳು ರದ್ದು

ರಾಜ್ಯದ ಬಜೆಟ್ ಮಂಡನೆ ಮಾಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಮ್ಮಿನಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ಶನಿವಾರ ಎಲ್ಲ ಕಾರ್ಯಕ್ರಮಗಳಲ್ಲಿ ಕೆಲವು ರದ್ದುಗೊಳಿಸಿದರೆ, ಮತ್ತೆ ಕೆಲವು ಕಾರ್ಯಕ್ರಮಗಳ ಪಟ್ಟಿಯನ್ನು ಬದಲಾಗಿಸಲಾಗಿದೆ.

ವಿಧಾನಸೌಧ ಅಧಿವೇಶನದಲ್ಲಿ ಶುಕ್ರವಾರ ಸುಮಾರು  3 ಗಂಟೆಗಳ ಕಾಲ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅವರಿಗೆ ವಿಪರೀತ ಕೆಮ್ಮು ಕಾಣಿಸಿಕೊಂಡಿದೆ. ಈ ಕೆಮ್ಮಿನ ಕಾರಣಕ್ಕಾಗಿ ಇಂದಿನ ಕಾರ್ಯಕ್ರಮಗಳಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ. ಹೀಗಾಗಿ, ಬಜೆಟ್ ಮಂಡನೆ ಬಳಿಕ ಸಿಎಂ ಸಿದ್ದರಾಮಯ್ಯ

ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ಸರ್ಕಾರಿ ಅಧಿಕಾರಿಗಳು ಆಗಮಿಸಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಐಜಿಪಿ ಅಲೋಕ್ ಮೋಹನ್, ಇಂಟಲಿಜೆನ್ಸ್ ಮುಖ್ಯಸ್ಥ ಶರತ್ ಚಂದ್ರ ಸೇರಿದಂತೆ ಹಲವು ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಆಗಮಿಸಿದ್ದಾರೆ.  


Leave a Comment