Coastal Bulletin

ಕಾಂಗ್ರೆಸ್ ಸರ್ಕಾರ ಬಡವರಿಗೆ ಅನ್ನಭಾಗ್ಯ ಯೋಜನೆಗಾಗಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚುವರಿ ಪೂರೈಕೆ ಮಾಡದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅಕ್ಕಿ ಪೂರೈಕೆ ಮಾಡಲು ಕೇಂದ್ರ ಅಡ್ಡಗಾಲು ಹಾಕಿದ್ದು, ಬಡವರ ಯೋಜನೆಗಳ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ, ಜೂನ್ 20 ರಾಜ್ಯಾದ್ಯಂತ ಕೇಂದ್ರ ಸರ್ಕಾರ ನೀತಿ ಖಂಡಿಸಿ ಪ್ರತಿಭಟನೆ ಕೂಡ ನಡೆಸಲಾಗಿತ್ತು.

 ಮುಕ್ತ ಮಾರುಕಟ್ಟೆಯಲ್ಲಿ ಧಾನ್ಯಗಳ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳಲು ಮತ್ತು ಕೈಗೆಟುಕುವ ದರದಲ್ಲಿ ಇರುವಂತೆ ಮಾಡಲು, ಕೇಂದ್ರ ಸರ್ಕಾರ ತನ್ನ ದಾಸ್ತಾನುಗಳಿಂದ ಕರ್ನಾಟಕಕ ಸೇರಿದಂತೆ ಹಲವು ರಾಜ್ಯಗಳಿಗೆ ಅಕ್ಕಿ ಕೊಡಲು ನಿರಾಕರಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳಿ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಸೃಷ್ಟನೆಯನ್ನು

ನೀಡಿದ್ದಾರೆ.

ಅಕ್ಕಿ ಪೂರೈಕೆ ಸಂಬ0ಧಿಸಿದ0ತೆ ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಪ್ರಶ್ನೆ ಮಾಡಿದಾಗ ಈ ಉತ್ತರ ನೀಡಿದ್ದು, ದೇಶದ 140 ಕೋಟಿ ಜನರನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಅಕ್ಕಿ ದಾಸ್ತಾನು ಇಡಲು ಕಾರ್ಯದರ್ಶಿಗಳ ಸಮಿತಿಯನ್ನು ರಚನೆ ಮಾಡಿದೆ. ರಾಜ್ಯಗಳು ಅಗತ್ಯಬಿದ್ದರೆ ಮುಕ್ತ ಮಾರುಕಟ್ಟೆಯಿಂದ ಖರೀದಿ ಮಾಡಬಹುದು ಎಂದು ತಿಳಿಸಿದ್ದಾರೆ. 


Leave a Comment