ಕಾಂಗ್ರೆಸ್ ಸರ್ಕಾರ ಹೇಳಿದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಅಗಸ್ಟ್ ೧೬ರಂದು ಜಾರಿ ಮಾಡಲಾಗುವುದು ಇದರ ಮೂಲಕ ಮಹಿಳೆಯರಿಗೆ 2000 ರೂ ಸಹಾಯಧನ ನೀಡುವುದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ೫ ಕೆಜಿ ಅಕ್ಕಿ ಬದಲು ಹಣ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 5 ಗ್ಯಾರಂಟಿಗಳ ಪೈಕಿ ಈಗಾಗಲೇ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ
ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು.
ಕುಟುಂಬದ ಯಾವ ವ್ಯಕ್ತಿಗೆ ಈ ಯೋಜನೆ ಅನ್ವಯವಾಗುತ್ತದೆ ಎಂದು ಇನ್ನು ಸಹ ನಿರ್ಧರವಾಗಿಲ್ಲ. ಆದರಿಂದ ಕೆಲ ಸಮಯ ಬೇಕಾಗಿದೆ. ಅರ್ಜಿ ನೋಂದಣಿ ಮಾಡಿಕೊಳ್ಳಲು ಸಮಯ ಬೇಕಾಗಿರುವುದರಿಂದ ಆಗಸ್ಟ್ 16 ಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
















