ವಿದ್ಯುತ್ ದರ ಏರಿಕೆ ವಿರೋಧಿಸಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇಂದು ರಾಜ್ಯಾದ್ಯಂತ ಮುಷ್ಕರ ನಡೆಸುವುದಾಗಿ ಘೋಷಿಸಿದ್ದು, ಇದರಿಂದ ಜನಸಾಮಾನ್ಯರಿಗೆ ಸ್ವಲ್ಪ ಮಟ್ಟದಲ್ಲಿ ತೊಂದರೆಯಾಗುವ ನಿರೀಕ್ಷೆಯಿದ್ದು, ಜೊತೆಗೆ ಕರ್ನಾಟಕ ಬಂದ್‌ಗೆ ಸಿಪಿಎಂ ಕೂಡ ಬೆಂಬಲವನ್ನು ನೀಡಿದೆ.
ಬಂದ್ ಕರೆ ಕೇವಲ ವ್ಯಾಪಾರ ಸಂಸ್ಥೆಗಳಿಗೆ ಮತ್ತು ಸ್ವಯಂಪ್ರೇರಿತವಾಗಿದೆ. ಅಗತ್ಯ ಸೇವೆಗಳಿಗೆ, ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಒಂದು ದಿನದ ಬಂದ್‌ನಿಂದ ವ್ಯಾಪಾರ ಸಂಸ್ಥೆಗಳು ನಷ್ಟವನ್ನು ಅನುಭವಿಸುತ್ತದೆ. ಆದರೆ ವಿದ್ಯುತ್ ದರದ ಹೆಚ್ಚಳದಿಂದ ಮುಂದೆ ಕೈಗಾರಿಕೆಗಳು ಉಳಿಯುವುದಿಲ್ಲ ಎಂದು ಕೆಸಿಸಿಐ ಅಧ್ಯಕ್ಷ ವಿನಯ್ ಜವಳಿ ಹೇಳಿದರು.
ಇಂದು ರಾಜ್ಯದ ಗದಗ,
ಬಿಜಾಪುರ, ರಾಣೆಬೆನ್ನೂರು, ರಾಯಚೂರು, ತಾಳಿಕೋಟೆ, ವಿಜಯನಗರ, ಮೈಸೂರು, ದಾವಣಗೆರೆ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಶಿರಸಿ, ಕಾರವಾರ, ಬೀದರ್, ಶಿವಮೊಗ್ಗ, ಕೋಲಾರ, ಮಂಡ್ಯ, ಚಿಕ್ಕಮಗಳೂರು, ಯಾದಗಿರಿ, ಚಿತ್ರದುರ್ಗ ಜಿಲ್ಲಾ ಚೇಂಬರ್‌ಗಳು ಮತ್ತು ಇತರೆ ಉದ್ಯಮ ಸಂಘಗಳು ಬಂದ್‌ನಲ್ಲಿ ಪಾಲ್ಗೊಳ್ಳಲಿವೆ. ಆದರೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳು ಬಂದ್ ಕರೆಗೆ ಸ್ಪಂದಿಸಿಲ್ಲ.















