Coastal Bulletin

ಕಾಂಗ್ರೆಸ್ ಸರ್ಕಾರ ಇದೀಗ ಅದಿಕಾರಕ್ಕೆ ಬಂದ ನಂತರ ರಾಜ್ಯದ ಬಡವರಿಗೆ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸುವುದಾಗಿ ಹೇಳಿದರು. ಆದರೆ ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ವಿತರಿಸಲಾಗುವುದಿಲ್ಲ ಎಂಬ ಕಾರಣದಿಂದ ರಾಜ್ಯ ಸರ್ಕಾರ ಕಂಗಲಾಗಿದೆ.

ಆದುದರಿಂದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ರವರು ಬುಧವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ಹೆಚ್ಚುವರಿಯಾಗಿ  5ಕೆಜಿ ಅಕ್ಕಿಯನ್ನು ಒದಗಿಸುವ ಅನ್ನಭಾಗ್ಯ ಯೋಜನೆಗಾಗಿ ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡುವ ಕುರಿತು ಚರ್ಚೆ ನಡೆಸಿದರು. 

ಎಫ್‌ಸಿಐ ಅಕ್ಕಿ ನೀಡಲು

ಒಪ್ಪಿಗೆ ನೀಡುವುದಾಗಿ ಭರವಸೆ ನೀಡಿ, ಮರುದಿನ ಇದ್ದಕ್ಕಿದ್ದಂತೆ ಎಫ್‌ಸಿಐ ನವರು ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ. ಮೇಲ್ನೋಟಕ್ಕೆ ನೋಡಿದರೆ ಇಲ್ಲಿ ರಾಜಕೀಯ ಮಾಡಿದಂತೆ ಕಾಣುತ್ತದೆ. ಇದರಲ್ಲಿ ದ್ವೇಷದ ರಾಜಕಾರಣ ಬೇಡ, ಇದು ಬಡವರಿಗೆ ನೀಡುವ ಅನ್ನಭಾಗ್ಯ ಯೋಜನೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.


Leave a Comment