ಚುನಾವಣೆ ಸೋಲಿಗೆ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ನಾನು ರಾಜೀನಾಮೆ ನೀಡಿಲ್ಲ ಎಂದು ಸ್ವತಃ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ
ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿದರು.
ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಖಿದೆ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.















